(Narendra Modi) ನವೆಂಬರ್ 28 ರಂದು ಉಡುಪಿಯ ಶ್ರೀಕೃಷ್ಣ ಮಠಕ್ಕೆ ಭೇಟಿ

ನವೆಂಬರ್ 28 ರ ಮಧ್ಯಾಹ್ನ 12 ಗಂಟೆಗೆ ಶ್ರೀ ಕೃಷ್ಣಮಠಕ್ಕೆ ಆಗಮಿಸಲಿರುವ ಅವರು ದೇವರ ದರ್ಶನ ಪಡೆದು ಪ್ರಸಾದ ಸ್ವೀಕರಿದ ಬಳಿಕ ಪರ್ಯಾಯ ಪುತ್ತಿಗೆಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರೊಂದಿಗೆ ಮಾತುಕತೆ ನಡೆಸಲಿದ್ದಾರೆ ಎಂದು ಮಠದ ಮೂಲಗಳು ತಿಳಿಸಿವೆ.

ಗೀತಾ ಜಯಂತಿ ಯ ಹಿನ್ನೆಲೆಯಲ್ಲಿ ಶ್ರೀ ಕೃಷ್ಣ ಮಠದ ಪಾರ್ಕಿಂಗ್ ಪ್ರದೇಶದಲ್ಲಿ ನೆಡೆಯಲಿರುವ ''ಲಕ್ಷ ಕಂಠ ಗೀತಾ ಪಾರಾಯಣ- ಬೃಹತ್ ಗೀತೋತ್ಸವ" ಸಮಾರಂಭದಲ್ಲಿ ಪ್ರಧಾನಿ ಮೋದಿ ಭಾಗಿಯಾಗಲಿದ್ದಾರೆ.