Mangaluru ಯುವಕನ‌ ಮೇಲೆ ತಲ್ವಾರ್‌ನಿಂದ ದಾಳಿ

ಮಂಗಳೂರು ಹೊರವಲಯದಲ್ಲಿ ಯುವಕನ‌ ಮೇಲೆ ತಲ್ವಾರ್‌ನಿಂದ ದಾಳಿ ನಡೆದಿರುವಂತಹ ಘಟನೆ ನಡೆದಿದೆ. ಬೈಕ್‌ನಲ್ಲಿ ತಲ್ವಾರ್‌ ಹಿಡಿದು ಸಾಗುತ್ತಿದ್ದ ನಾಲ್ವರು ದುಷ್ಕರ್ಮಿಗಳಿಂದ ಕೃತ್ಯವೆಸಗಲಾಗಿದೆ. 

ಮೂಡಬಿದ್ರೆ ನಿವಾಸಿ ಅಖಿಲೇಶ್‌ ಹಲ್ಲೆಗೊಳಗಾದ ವ್ಯಕ್ತಿ. ಮೊಣಕೈ ಭಾಗಕ್ಕೆ ಗಾಯವಾಗಿದ್ದು, ಮೂಡಬಿದ್ರೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.