SRI KRISHNA ಮಠಕ್ಕೆ ಪ್ರಧಾನಿ ಭೇಟಿ:ನ 28 ರಂದು ಭಕ್ತರಿಗೆ ದರ್ಶನ ಸಮಯ ನಿಗದಿ

ಉಡುಪಿ ಪರ್ಯಾಯ ಶ್ರೀ ಪುತ್ತಿಗೆ ಮಠದ ಆಶ್ರಯದಲ್ಲಿ ನಡೆಯುತ್ತಿರುವಂತಹ ಕೋಟಿ ಗೀತಾ ಲೇಖನ ಯಜ್ಞದ ಪ್ರಯುಕ್ತ ನವೆಂಬರ್ 28 ರಂದು ನಡೆಯುವ ಲಕ್ಷಕಂಠ ಗೀತಾ ಪಾರಾಯಣಕ್ಕೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಆಗಮಿಸುತ್ತಿರುವ ಹಿನ್ನಲೆಯಲ್ಲಿ ಭಕ್ತರಿಗೆ ಶ್ರೀ ಕೃಷ್ಣ ಮಠದ ದರ್ಶನದ ಸಮಯ ನಿಗದಿಪಡಿಸಲಾಗಿದೆ.

ಸಾರ್ವಜನಿಕರಿಗೆ ನ 28 ರಂದು ಬೆಳಗ್ಗೆ 8 ಗಂಟೆಯಿಂದ ಮಧ್ಯಾಹ್ನ 3 ಗಂಟೆಯವರೆಗೆ ಶ್ರೀ ಕೃಷ್ಣ ಮಠಕ್ಕೆ ಭಕ್ತಾದಿಗಳ ಪ್ರವೇಶವನ್ನು ನಿರ್ಬಂಧಿಸಿಲಾಗಿದೆ. ಸಾರ್ವಜನಿಕರು ಈ ಸೂಚನೆಯನ್ನು ಗಮನಿಸಿ ಸಹಕರಿಸಬೇಕಾಗಿ ಶ್ರೀಮಠದ ಪ್ರಕಟಣೆ ತಿಳಿಸಿದೆ. ಪ್ರಧಾನಿ ಮೋದಿ ಕೃಷ್ಣನ ಸನ್ನಿಧಾನಕ್ಕೆ ಆಗಮಿಸಿ, ಭಕ್ತ ಸಮೂಹದೊಂದಿಗೆ ಗೀತಾ ಪಾರಾಯಣ ನಡೆಸಿ ಶ್ರೀಕೃಷ್ಣನಿಗೆ ಸಮರ್ಪಿಸಲಿದ್ದಾರೆ. ಈಗಾಗಲೇ ಸಕಲ ವ್ಯವಸ್ಥೆಗಳನ್ನು ಮಾಡಿಕೊಳ್ಳಲಾಗಿದ್ದು, ಅಂತಿಮ ಹಂತದ ಕೆಲಸ ಮಾತ್ರ ಬಾಕಿ ಉಳಿದಿವೆ. ನಗರದಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ.