Udupi ಹೆಲಿಪ್ಯಾಡ್ ನಲ್ಲಿ ಸೇನಾ ಹೆಲಿಕಾಪ್ಟರ್ ರಿಹರ್ಸಲ್

ಪ್ರಧಾನಿ ನರೇಂದ್ರ ಮೋದಿ ಅವರು ಇದೇ ನ.28ರಂದು ಉಡುಪಿಗೆ ಆಗಮಿಸಲಿದ್ದಾರೆ. ಪ್ರಧಾನಿ ಕೃಷ್ಣಮಠದಲ್ಲಿ ನಡೆಯಲಿರುವ ಲಕ್ಷಕಂಠ ಗೀತಾ ಪಾರಾಯಣ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಈ ಹಿನ್ನೆಲೆಯಲ್ಲಿ ಉಡುಪಿ ನಗರದಲ್ಲಿ ಭಾರೀ ಕಟ್ಟೆಚ್ಚರ, ಬಿಗಿ ಭದ್ರತೆ ಕೈಗೊಳ್ಳಲಾಗಿದೆ.



ಪ್ರಧಾನಿ ಬರುವ ಸಲುವಾಗಿ ಆದಿಉಡುಪಿಯಲ್ಲಿ ನೂತನ ಹೆಲಿಪ್ಯಾಡ್ ನಿರ್ಮಾಣ ಮಾಡಲಾಗಿದೆ. ಮಂಗಳೂರು ವಿಮಾನ‌ ನಿಲ್ದಾಣದಿಂದ ಹೆಲಿಕಾಪ್ಟರ್ ಮೂಲಕ ಉಡುಪಿಯ ಆದಿಉಡುಪಿ ಹೆಲಿಪ್ಯಾಡ್ ಗೆ ಪ್ರಧಾನಿ ಆಗಮಿಸಲಿದ್ದು, ಈ ನಿಟ್ಟಿನಲ್ಲಿ ಆದಿ ಉಡುಪಿ ಹೆಲಿಪ್ಯಾಡ್ ಪರಿಸರದಲ್ಲಿ ಸೇನಾ ಹೆಲಿಕಾಪ್ಟರ್ ಗಳು ರಿಹರ್ಸಲ್ ನಡೆಸುತ್ತಿವೆ. ಮೂರು ಸೇನಾ ಹೆಲಿಕಾಪ್ಟರ್ ಗಳು ಆಕಾಶದಲ್ಲಿ ಸಂಚರಿಸಿ ಪರಿಶೀಲನೆ ನಡೆಸಿದವು. ಪ್ರಧಾನಿ ಭೇಟಿಗೂ ಮುನ್ನ ಸೇನಾ ಹೆಲಿಕಾಪ್ಟರ್ ಮೂಲಕ ಭದ್ರತಾ ಪರಿಶೀಲನೆ ಕೈಗೊಳ್ಳಲಾಯಿತು.